Monday, July 4, 2022

Latest Posts

ಮೈಸೂರು: ಮತ್ತೆ ಇಬ್ಬರು ಕಾರ್ಮಿಕರಿಗೆ ಕೊರೋನಾ ಸೋಂಕು 

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಡಕೊಳದಲ್ಲಿರುವ ಜುಬಿಲಿಯಂಟ್ ಔಷಧ ಕಾರ್ಖಾನೆಯ ಮತ್ತೆ ಇಬ್ಬರು ಕಾರ್ಮಿಕರಿಗೆ ಕೊರೋನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

ಕೊರೋನಾ ಸೋಂಕಿತ 88ರೋಗಿಯೊಂದಿಗೆ ಸಂಪರ್ಕದಲ್ಲಿದ್ದ 22 ಹಾಗೂ 24ವರ್ಷದ ಯುವಕರಿಗೆ ಕೊರೋನಾ ಸೋಂಕು ಇದ್ದು, ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ಈ ಕಾರ್ಖಾನೆ ಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 19ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss