Sunday, June 26, 2022

Latest Posts

ಮೈಸೂರು| ಮಾಸ್ಕ್ ಧರಿಸಿ ಮತದಾನ ಮಾಡಲು ಸೂಚಿಸಿದ ಎಎಸ್ಪಿ

ಹೊಸ ದಿಗಂತ ವರದಿ ಮೈಸೂರು:

ಜಿಲ್ಲೆಯಲ್ಲಿ ಭಾನುವಾರ ನಡೆಯುತ್ತಿರುವ ಎರಡನೇ ಹಂತದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮತದಾರರು ಕೋವಿಡ್ ನಿಯಮಗಳನ್ನು ಪಾಲಿಸದಿರುವುದು ಕಂಡು ಬಂತು. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಎಸ್.ದಂಡಿನ ಅವರು ಭೇಟಿ ನೀಡಿ ಬಂದೋಬಸ್ತ್ ಪರಿಶೀಲಿಸಿದರು.

ಈ ವೇಳೆ ಮತಗಟ್ಟೆಯಲ್ಲಿ ಮತ ಚಲಾಯಿಸಲು ಬಂದ ಮತದಾರರು ಮಾಸ್ಕ್ ಧರಿಸದೆ ಇರುವುದನ್ನು ಕಂಡು ಅಂತಹವರು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss