Sunday, August 14, 2022

Latest Posts

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರ ಹೆಚ್ಚಳ

ಮೈಸೂರು: ಕೋವಿಡ್ ಸಾಂಕ್ರಾಮಿಕವು ಪೂರ್ತಿ ದೇಶದಲ್ಲಿ ಹೆಚ್ಚು ವೇಗವಾಗಿ ಹರಡುತ್ತಿರುವ ಕಾರಣ, ಸಾರ್ವಜನಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಮೈಸೂರು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಡಿ.31ರವರೆಗೆ ರೂ.50 ಕ್ಕೆ ಹೆಚ್ಚಿಸಲಾಗಿದೆ.
ಪ್ಲಾಟ್‌ಫಾರ್ಮ್ ಟಿಕೆಟ್‌ನ ದರ ಹೆಚ್ಚಳವು ಸಾರ್ವಜನಿಕರ ವೃಥಾ ಪ್ಲಾಟ್‌ಫಾರ್ಮ್ ಪ್ರವೇಶವನ್ನು ನಿರ್ಬಂಧಿಸುವ ಉದ್ದೇಶವನ್ನು ಹೊಂದಿದೆ ಮತ್ತು ಇದರಿಂದಾಗಿ ಪ್ಲಾಟ್‌ಫಾರ್ಮ್ ಗಳಲ್ಲಿ ಜನದಟ್ಟಣೆ ತಪುö್ಪತ್ತದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಜನಸಂಪರ್ಕಾಧಿಕಾರಿ ಪ್ರಿಯಾ ಶೆಟ್ಟಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss