Thursday, August 18, 2022

Latest Posts

ಮೈಸೂರು| ಸಾಲ ನೀಡಿದವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ ರೈತ

ಮೈಸೂರು: ಸಾಲದ ಹಣ ಮರುಪಾವತಿ ಮಾಡುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನೀಡುತ್ತಿದ್ದ ಕಿರುಕುಳ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ಮಹದೇವ ನಗರದಲ್ಲಿ ನಡೆದಿದೆ.
ಗ್ರಾಮದ ನಿವಾಸಿಯಾದ ಮಾರಪ್ಪ (30) ಆತ್ಮಹತ್ಯೆಗೆ ಯತ್ನಿಸಿದ ರೈತ. ಈತ ನಂಜನಗೂಡು ಹಾಗೂ ಎಚ್.ಡಿ.ಕೋಟೆಯ ಸಂಘಗಳಲ್ಲಿ 40 ಸಾವಿರ ಸಾಲ ಪಡೆದುಕೊಂಡಿದ್ದು, ತನ್ನ ಜಮೀನಿನಲ್ಲಿ ಹತ್ತಿ, ರಾಗಿ ಮತ್ತು ಜೋಳವನ್ನು ಬೆಳೆದಿದ್ದನು. ಬೆಳೆ ಕೈಗೆ ಬರುವಷ್ಟರಲ್ಲಿ ಆನೆ ದಾಳಿಯಿಂದ ಬೆಳೆ ನಾಶವಾಗಿದೆ. ಈ ಸಂದರ್ಭದಲ್ಲಿ ಸಾಲ ವಾಪಸ್ ನೀಡುವಂತೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮಾರಪ್ಪನನ್ನು ಪೀಡಿಸುತ್ತಿದ್ದರು. ಹೀಗಾಗಿ ಕಿರುಕುಳಕ್ಕೆ ಬೇಸತ್ತು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದು, ಈಗ ಮೈಸೂರು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!