spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೈಸೂರು: ಸ್ನೇಹಿತನಿಂದ ಹತ್ಯೆಗೊಳಗಾದ ಬಿಜೆಪಿ ಮುಖಂಡ ಆನಂದ್

- Advertisement -Nitte

ಮೈಸೂರು: ಬಿಜೆಪಿ ಮುಖಂಡ ಆನಂದ್ ರನ್ನು ಗುರುವಾರ ತಡರಾತ್ರಿ ಮೈಸೂರಿನ ಕುವೆಂಪುನಗರದಲ್ಲಿ ಸ್ನೇಹಿತನೇ ಹತ್ಯೆಗೈದಿರುವ ಘಟನೆ ನಡೆದಿದೆ.

ಇಲ್ಲಿನ ಕುವೆಂಪುನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಬಿಜೆಪಿ ಮುಖಂಡ ಆನಂದ್ ಅವರ ಕೊಲೆ ಮಾಡಲಾಗಿದೆ. ಬಿಜೆಪಿ ಮುಖಂಡ ಹೆಚ್.ವಿ. ರಾಜೇಶ್ ಬೆಂಬಲಿಗನಾಗಿದ್ದ ಆನಂದ್ ಕೊಲೆಯಾದ ವ್ಯಕ್ತಿ.

ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ರೂಂ ಮಾಡಿ ಪಾರ್ಟಿ ಆಯೋಜಿಸದ್ದ. ಪಾರ್ಟಿ ನಡೆಯುವಾಗ ಸ್ನೇಹಿತರ ನಡುವೆ ಮಾತಿನ ಚಕಮಕಿ ನಡೆಯಿತು. ಮಾತು ವಿಕೋಪಕ್ಕೆ ತಿರುಗಿ ಸ್ನೇಹಿತರು ಬಿಯರ್ ಬಾಟಲಿನಿಂದ ಚುಚ್ಚಿ ಹತ್ಯೆಗೈದಿದ್ದಾರೆ. ಕುವೆಂಪುನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಪೊಲೀಸ್ ಬಂಧಿಸಿದ್ದಾರೆ.

ಜನತಾ ನಗರದ ಸ್ಮಶಾನ ರಸ್ತೆಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆನಂದ್ ಆರೋಪಿಯಾಗಿದ್ದ. ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನಡೆಸುತ್ತಿದ್ದ ಎಂದು ಹೇಳಲಾಗಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss