Wednesday, June 29, 2022

Latest Posts

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಡಿ.ಎಸ್.ಶ್ರೀಧರ್ ಅವರಿಗೆ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ

ಹೊಸದಿಗಂತ ವರದಿ ಮಂಗಳೂರು :

ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳಾದ ಡಿ.ಎಸ್.ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಪ್ರಶಸ್ತಿಯ ವಿವರ ನೀಡಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿಯು ಸರ್ಕಾರದ ನಿಯಮಾನುಸಾರ ಓರ್ವ ಗಣ್ಯರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಹಾಗೂ 5 ಮಂದಿ ಗಣ್ಯರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಮಂದಿ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದವರು ತಿಳಿಸಿದರು.
ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಿಗೆ ರೂ .1 ಲಕ್ಷ ನಗದು , ಪ್ರಶಸ್ತಿ ಫಲಕ , ನೀಡಿ ಪುರಸ್ಕರಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.
‘ಗೌರವ ಪ್ರಶಸ್ತಿ’ಗೆ ಬಿ.ಸಂಜೀವ ಸುವರ್ಣ , ಕೆ.ತಿಮ್ಮಪ್ಪ ಗುಜರನ್ , ಡಾ . ವಿಜಯನಳಿನಿ ರಮೇಶ್ , ಡಾ . ಚಕ್ಕೆರೆ ಶಿವಶಂಕರ್ , ಬಿ.ಪರಶುರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ .50,000 ಗಳ ನಗದು , ಪ್ರಶಸ್ತಿ ಫಲಕ , ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು .
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಗೋಪಾಲ ಆಚಾರ್ಯ ತೀರ್ಥಹಳ್ಳಿ, ಬೇಲೂರು ರಮೇಶ್ , ಆವರ್ಸೆ ಶ್ರೀನಿವಾಸ ಮಡಿವಾಳ , ಹರಿನಾರಾಯಣ ಬೈಪಾಡಿತ್ತಾಯ , ಸಂಜಯ್ ಕುಮಾರ್ ಶೆಟ್ಟಿ , ಎಂ.ಆರ್.ಹೆಗಡೆ ಕಾನಗೋಡ , ಸುಬ್ರಹ್ಮಣ್ಯ ಧಾರೇಶ್ವರ , ವಿಟ್ಲ ಶಂಭು ಶರ್ಮ , ಹನುಮಂತರಾಯಪ್ಪ , ಎ.ಎಂ.ಮುಳವಾಗಲಪ್ಪ ಅವರನ್ನು ಆಯ್ಕೆ ಮಾಡಲಾಗಿದೆ . ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ .25,000 ನಗದು , ಪ್ರಮಾಣಪತ್ರ ನೀಡಿ ಪುರಸ್ಕರಿಸಲಾಗುವುದು ಎಂದು ಪ್ರೊ.ಹೆಗಡೆ ವಿವರ ನೀಡಿದರು.
‘ ಪಾರ್ತಿಸುಬ್ಬ ಪ್ರಶಸ್ತಿ , ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ 2021 ರ ಫೆಬ್ರವರಿ ಎರಡನೇ ಅಥವಾ 3 ನೇ ವಾರದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಅಥವಾ ನಯನ ರಂಗಮಂದಿರದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಪ್ರೊ.ಎಂ.ಎ.ಹೆಗಡೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss