ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಯಲಚೇನಹಳ್ಳಿ-ಅಂಜನಾಪುರ ವಿಸ್ತರಿತ ನಮ್ಮ ಮೆಟ್ರೋ ಹಸಿರು ಮಾರ್ಗಕ್ಕೆಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ಸಿಂಗ್ ಪುರಿ ಹಾಗು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.
ಈ ಮಾರ್ಗವನ್ನು ಯಲಚೇನಹಳ್ಳಿಯಿಂದ ಅಂಜನಾಪುರಕ್ಕೆ 6 ಕಿ.ಮೀ ನಷ್ಟು ದೂರ ವಿಸ್ತರಿಸಲಾಗಿದೆ. ಕನಕಪುರ ರಸ್ತೆಯಲ್ಲಿ 6 ಕಿ.ಮೀನಷ್ಟು ದೂರ ವಿಸ್ತರಿಸಲಾಗಿದೆ. ಸಚಿವ ಆರ್ ಅಶೋಕ್, ಸದಾನಂದಗೌಡ, ಗೋವಿಂದ ಕಾರಜೋಳ, ಎಸ್ಆರ್ ವಿಶ್ವನಾಥ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.