Sunday, August 14, 2022

Latest Posts

ಯಾದಗಿರಿ| ಆಸ್ಪತ್ರೆಗೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ: ಜಿಲ್ಲಾಧಿಕಾರಿ

ಯಾದಗಿರಿ: ಆಸ್ಪತ್ರೆಗೆ ಬರುವ ರೋಗಿಗಳು, ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಆಸ್ಪತ್ರೆಗೆ ಪ್ರವೇಶಿಸುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.
ಜಿಲ್ಲೆಯ ಕಂದಕೂರು ಪ್ರಾಥಮಿಕ ಆರೊಗ್ಯ ಕೇಂದ್ರ ಹಾಗೂ ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿದ ಅವರು, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಅವಶ್ಯವಿರುವ ಪಿ.ಪಿ.ಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಕೊರತೆಯಾಗದಂತೆ ಕ್ರಮವಹಿಸಬೇಕು. ಒಂದು ವೇಳೆ ಬೇಡಿಕೆಯಿದ್ದರೆ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತರತಕ್ಕದ್ದು. ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ಸಂಬoಧಪಟ್ಟ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಯಾದಗಿರಿ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಪ್ರತಿ ಒಂದು ಮಿಲಿಯನ್ ಜನಸಂಖ್ಯೆಗಳ ಪೈಕಿ 7,297 ಕೋವಿಡ್ ಟೆಸ್ಟ್ಗಳನ್ನು ಮಾಡಲಾಗಿದ್ದು, ಇದು ರಾಜ್ಯದಲ್ಲಿಯೇ ಅತೀ ಹೆಚ್ಚು ಟೆಸ್ಟ್ಗಳನ್ನು ಕೈಗೊಂಡ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜ್ವರದ ಲಕ್ಷಣ ಹಾಗೂ ತೀವ್ರ ಉಸಿರಾಟದ ಸೋಂಕಿನoತಹ (ಐಎಲ್‌ಐ, ಸ್ಯಾರಿ) ಲಕ್ಷಣಗಳನ್ನು ಹೊಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ತಂಡವನ್ನು ಸಂಪರ್ಕಿಸಿ ಸ್ವಾಬ್ ಪರೀಕ್ಷೆಯನ್ನು ಮಾಡಿಸಿಕೊಳ್ಳತಕ್ಕದ್ದು. ಎಲ್ಲ ಸಾರ್ವಜನಿಕರು ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಗೂಗಲ್ ಪ್ಲೇಸ್ಟೋರ್‌ನಿಂದ ಆರೋಗ್ಯ ಸೇತು ಆ್ಯಪ್‌ನ್ನು ಇನ್‌ಸ್ಟಾಲ್ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅವರು ಕೋರಿದ್ದಾರೆ.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ ಅವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss