Tuesday, August 16, 2022

Latest Posts

ಯಾದಗಿರಿ| ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡಲು ವಲಸಿಗರ ಮನೆ ಮನೆ ಸಮೀಕ್ಷಾ ಕಾರ್ಯ ಪ್ರಾರಂಭ

ಯಾದಗಿರಿ: ದೇಶವ್ಯಾಪ್ತಿ ಮಹಾಮಾರಿ ಕೊರೋನಾದಿಂದ ಭೀತಿಗೆ ಒಳಗಾದ ಕೂಲಿ ಕಾರ್ಮಿಕರು ವಿವಿಧ ಪ್ರದೇಶಗಳಿಂದ ಸ್ವಗ್ರಾಮಕ್ಕೆ ಮರಳಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಬೈ, ಗುಜರಾತ, ಧಾವ್ರ, ಬೆಂಗಳೂರು ಮತ್ತು ಗೋವಾ ತಾಜ್ಯಗಳಿಗೆ ಸುಮಾರು 15 ಸಾವಿರ ಜನರು ಆಗಮಿಸಿದ್ದಾರೆ. ಅವರು ಯಾವುದೇ ಕೆಲಸವಿಲ್ಲದೆ ತಮ್ಮ ತಮ್ಮ ಗ್ರಾಮಗಳಲ್ಲಿ ಇರುವುದನ್ನು ಮನಗಂಡ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ್ ಅವರು ವಲಸಿಗರ ಸಮೀಕ್ಷೆ ಕಾರ್ಯ ಪ್ರಾರಂಭಿಸಿದ್ದು, ಅವರಿಗೆ ಉದ್ಯೋಗ ಒದಗಿಸಲು ಮುಂದಾಗಿದ್ದಾರೆ.
ವಲಸಿಗರ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಶಹಪೂರ ತಾಲೂಕಿನ ದೋರನಹಳ್ಳಿ ಗ್ರಾಮದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡಲು ವಲಸಿಗರ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಆರಂಭಿಸಲಾಗಿದೆ. ಯಾದಗಿರಿ ತಾಲೂಕಿನ ಕೌಳೂರು ಮತ್ತು ಸುರಪುರ ತಾಲೂಕಿನ ಬರ ದೇವನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಸಮೀಕ್ಷೆ ಕಾರ್ಯ ಪ್ರಾರಂಭವಾಗಿದೆ ಎಂದು ಹೇಳಿದರು.
ಶನಿವಾರದಂದು ದೋರನಹಳ್ಳಿ ಗ್ರಾಮದಲ್ಲಿ ವಲಸೆ ಕಾರ್ಮಿಕರ ಸಮೀಕ್ಷೆಯನ್ನು ಆರಂಭಿಸುವ ಮೂಲಕ ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿಗಳು, ಕರವಸೂಲಿಗಾರರು, ಕಂಪ್ಯೂಟರ್ ಆಪರೇಟರ್‌ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷಾ ಕಾರ್ಯದಲ್ಲಿ ಸಾಥ್ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss