Monday, July 4, 2022

Latest Posts

ಯಾದಗಿರಿ| ಕೊರೋನಾ ಮುಕ್ತ ಜಿಲ್ಲೆಗಾಗಿ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ

ಯಾದಗಿರಿ: ನೋವೆಲ್ ಜಿಲ್ಲಾಧಿಕಾರಿ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮತ್ತು ಆಗಾಗ ಕೈಗಳನ್ನು ತೊಳೆದುಕೊಳ್ಳುವ ಮೂಲಕ ಕೊರೋನಾ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸುಮಾರು 14,000 ವಲಸೆಗಾರರು ಗೃಹ ದಿಗ್ಬಂಧನ ಪೂರ್ಣಗೊಳಿಸಿದ್ದು, ಅಂದಾಜು ಇನ್ನೂ 800 ಜನ ಗೃಹ ದಿಗ್ಬಂಧನದಲ್ಲಿದ್ದಾರೆ. ಜಿಲ್ಲೆಯಲ್ಲಿ 75 ಕಂಟೇನ್‌ಮೆAಟ್ ಝೋನ್‌ಗಳನ್ನು ರಚಿಸಲಾಗಿದೆ. ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ವಲಸೆಗಾರರನ್ನು ಗೃಹ ದಿಗ್ಬಂಧನದಲ್ಲಿಡಲಾಗುತ್ತಿದೆ. ತಮ್ಮ ಅವಲೋಕನಾ ಅವಧಿ ಮುಗಿಯುವವರೆಗೆ ಕಡ್ಡಾಯವಾಗಿ ಗೃಹ ದಿಗ್ಬಂಧನದಲ್ಲಿ ಇರತಕ್ಕದ್ದು. ಒಂದು ವೇಳೆ ಗೃಹ ದಿಗ್ಬಂಧನ ಬಿಟ್ಟು ಹೊರಗಡೆ ತಿರುಗಾಡುವುದು ಕಂಡುಬoದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಪುನಃ ಸಾಂಸ್ಥಿಕ ದಿಗ್ಬಂಧನದ ಅವಲೋಕನೆಗಾಗಿ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೃಹ ದಿಗ್ಬಂಧನದಲ್ಲಿರುವವರು ಮನೆಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಮನೆಯಿಂದ ಹೊರಗಡೆ ತಿರುಗಾಡದೆ, ಗೃಹ ದಿಗ್ಬಂಧನ ಅವಲೋಕನಾ ಅವಧಿಯನ್ನು ಉಲ್ಲಂಘನೆ ಮಾಡದೇ ಇದ್ದಲ್ಲಿ ಅಂತಹ ವಲಸೆಗಾರರಿಗೆ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವೈದ್ಯರು, ತಜ್ಞ ವೈದ್ಯರು, ಮೈಕ್ರೋಬಯಾಲಜಿಸ್ಟ್ ಇಚ್ಛಿತ ವೈದ್ಯರು ಸ್ವಇಚ್ಛೆಯಿಂದ ಸೇವೆ ಸಲ್ಲಿಸಲು ಮುಂದೆ ಬಂದಲ್ಲಿ ಮೊದಲು ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
53 ಜನರ ಬಂಧನ; 109 ಎಫ್.ಐ.ಆರ್
ಕೋವಿಡ್-19 ವೈರಾಣು ಇಡೀ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಯಾದಗಿರಿ ಜಿಲ್ಲೆಯ ಗಡಿ ಭಾಗದಲ್ಲಿ ಒಟ್ಟು 16 ಚೆಕ್‌ಪೋಸ್ಟ್ಗಳು ಕಾರ್ಯನಿರ್ವಹಿಸುತ್ತಿದ್ದು, ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಜೂನ್ 23ರವರೆಗೆ ಒಟ್ಟು 1658 ವಾಹನಗಳನ್ನು ಜಪ್ತಿ ಮಾಡಲಾಗಿದೆ. 53 ಜನರನ್ನು ಬಂಧಿಸಲಾಗಿದ್ದು, ಒಟ್ಟು 109 ಎಫ್.ಐ.ಆರ್ ದಾಖಲಾಗಿವೆ ಮತ್ತು 51,47,800 ರೂ. ದಂಡ ವಿಧಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಶೇ.80.63ರಷ್ಟು ಆಹಾರಧಾನ್ಯ ವಿತರಣೆ: ಜಿಲ್ಲೆಯಾದ್ಯಂತ ಬಿ.ಪಿ.ಎಲ್ ಮತ್ತು ಎ.ಎ.ವೈ ಕಾರ್ಡ್ ಹೊಂದಿರುವ ಪಡಿತರ ಫಲಾನುಭವಿಗಳಿಗೆ ಜೂನ್ ತಿಂಗಳ ಆಹಾರಧಾನ್ಯವನ್ನು ಶೇ.80.63ರಷ್ಟು ವಿತರಿಸಲಾಗಿರುತ್ತದೆ. ಜಿಲ್ಲೆಯ ನಾಗರಿಕರಿಗೆ ಅಗತ್ಯ ಇರುವ ಸರಕುಗಳನ್ನು ಖರೀದಿಸಲು ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss