ಯಾದಗಿರಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಬುಧವಾರ 72 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 5113 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 45 ಜನರು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 9ರ ಬುಧವಾರ ಹೊಸದಾಗಿ 95 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6436ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1278 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.