Wednesday, August 10, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ ಮತ್ತೆ 64 ಜನರಿಗೆ ಸೋಂಕು ದೃಢ, 9 ಜನ ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಒಟ್ಟು 64 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 2052 ಪ್ರಕರಣಗಳ ಪೈಕಿ ಇಂದು 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ತನಕ ಇಬ್ಬರು ಮೃತಪಟ್ಟಿದ್ದಾರೆ. ಇಲ್ಲಿಯತನಕ ಒಟ್ಟು 471 ಸಕ್ರೀಯ ಪ್ರಕರಣ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್.ಸೋಮನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೆ ಜಿಲ್ಲೆಯ ಪಟ್ಟಣ ಪ್ರದೇಶಗಳು ಸೇರಿದಂತೆ ಗ್ರಾಮೀಣ ಪ್ರದೇಶಕ್ಕೂ ಹರಡಿದ್ದು, ಜನರಲ್ಲಿ ಭೀತಿ ಹುಟ್ಟಿಸಿದೆ. ಜಿಲ್ಲೆಯ ಸಾರಿಗೆ ಸಂಸ್ಥೆಯ ಸಿಬ್ಬಂಧಿಗಳಲ್ಲಿ ಮತ್ತು ಇತರ ಇಲಾಖೆಯಲ್ಲಿ ಸೋಂಕು ಕಂಡುಬರುತ್ತಿದ್ದು ಸಾರ್ವಜನಕರಲ್ಲಿ ಆತಂಕ ಮನೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss