ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿoದ ಆಸ್ಪತ್ರೆಗೆ ದಾಖಲಾದವರಲ್ಲಿ ಆ.29 ರ ಶನಿವಾರದಂದು 65 ಜನರು ಸಂಪೂರ್ಣ ಗುಣಮುಖ ಬಿಡುಗಡೆಯಾಗಿದ್ದು, ಒಟ್ಟಾರೆ ಇದುವರೆಗೆ 3503 ಮಂದಿ ಗುಣಮುಖರಾಗಿದ್ದಾರೆ. ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಅವರು ತಿಳಿಸಿದ್ದಾರೆ.
ಆಗಸ್ಟ್ 29 ರ ಶನಿವಾರದಂದು ಹೊಸದಾಗಿ 98 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5205ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1663 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ಸೋಂಕಿನಿoದ ಇಂದು ಒಂದು ಸಾವು ಆಗಿದ್ದ್ಲು. ಒಟ್ಟಾರೆ ಜಿಲ್ಲೆಯಲ್ಲಿ 39 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. .ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಇದರಿಂದಾಗಿ ಜನತೆಯಲ್ಲಿ ಭೀತಿ ಹುಟ್ಟಿಕೊಂಡಿದೆ