ಯಾದಗಿರಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ.19ರ ಶನಿವಾರ 102 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 6456 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 49 ಜನರು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 19ರ ಶನಿವಾರ ಹೊಸದಾಗಿ 127 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 7632ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1127 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.