Tuesday, August 9, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ 86 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ

ಯಾದಗಿರಿ: ಜಿಲ್ಲೆಯಲ್ಲಿ  ಸೋಮವಾರದಂದು 12 ಜನರು ಸಂಪೂರ್ಣ ಗುಣಮುಖರಾಗುವ ಮೂಲಕ ಒಟ್ಟಾರೆ ಇದೂವರೆಗೆ 1915 ಮಂದಿ ಗುಣಮುಖರಾಗಿದ್ದಾರೆ. ಇಂದು ಹೊಸದಾಗಿ 86 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2511ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 588 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 8 ಜನರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ, ಇಂದು ವರದಿಯಾದ 86 ಪ್ರಕರಣಗಳಲ್ಲಿ 43 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 33 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನೂಳಿದ 09 ಪ್ರಕರಣಗಳು ಸುರಪೂರ ನಗರ ಹಾಗೂ ಗ್ರಾಮೀಣ ಪ್ರದೇಶದವರು. 1 ಪ್ರಕರಣ ಅಂತರ್ ಜಿಲ್ಲೆಯದು ದೃಢಪಟ್ಟಿದೆ ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್. ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss