Thursday, July 7, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ 107 ಕೋವಿಡ್-19 ಪಾಸಿಟಿವ್ ದೃಢ, 79 ಜನರು ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಆ.18ರ ಮಂಗಳವಾರದಂದು 79 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 2732 ಮಂದಿ ಗುಣಮುಖರಾಗಿದ್ದಾರೆ. ಇಂದು ಹೊಸದಾಗಿ 107 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4013ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1255 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ಸೋಂಕಿನಿಂದ ಇಂದು 3 ಜನರು ಮೃತಪಟ್ಟಿದು, ಒಟ್ಟಾರೆ ಜಿಲ್ಲೆಯಲ್ಲಿ 26 ಜನರು ಮೃತಪಟ್ಟಿದ್ದಾರೆ. ಇಂದು ವರದಿಯಾದ 107 ಪ್ರಕರಣಗಳಲ್ಲಿ 38 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 39 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನೂಳಿದ 30 ಪ್ರಕರಣಗಳು ಸುರಪೂರ ನಗರ ಮತು ಗ್ರಾಮೀಣ ಪ್ರದೇಶದವರು. ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿಗಳಾದ ಶಂಕರಗೌಡ ಎಸ್. ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss