Wednesday, August 10, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ 132 ಕೋವಿಡ್ ಪ್ರಕರಣ ದೃಢ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿoದ ಆಸ್ಪತ್ರೆಗೆ ದಾಖಲಾದವರಲ್ಲಿ ಆ. 25 ರ ಮಂಗಳವಾರದoದು 18 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 3202 ಮಂದಿ ಗುಣಮುಖರಾಗಿದ್ದಾರೆ. ಎಂದು ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್. ಸೋಮನಾಳ ಅವರು ತಿಳಿಸಿದ್ದಾರೆ.
ಆಗಸ್ಟ್ 25 ರ ಮಂಗಳವಾರದoದು ಹೊಸದಾಗಿ 132 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4827ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1592 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ಸೋಂಕಿನಿoದ ಇಂದು ಯಾವುದೇ ಸಾವು ಪಟ್ಟೊಲ್ಲ. ಒಟ್ಟಾರೆ ಜಿಲ್ಲೆಯಲ್ಲಿ 35 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss