Wednesday, July 6, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ 151 ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ, 22 ಮಂದಿ ಗುಣಮುಖ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಸೆ. 12ರ ಶನಿವಾರ 22 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 5327 ಮಂದಿ ಗುಣಮುಖರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 46 ಜನರು ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 12ರ ಶನಿವಾರ ಹೊಸದಾಗಿ 151 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 6788ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1415 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss