Thursday, August 18, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ 67 ಸೋಂಕು ದೃಢ, 12 ಜನ ಗುಣಮುಖ

ಯಾದಗಿರಿ : ಮಂಗಳವಾರದಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ  ಆರೋಗ್ಯ ಬುಲೆಟ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ 67 ಪ್ರಕರಣಗಳು ದೃಡಪಟ್ಟಿದ್ದು, 2119 ಕ್ಕೆ ಏರಿಕೆಯಾಗಿದೆ. ಇಂದು 12 ಜನ ಬಿಡುಗಡೆಯಾಗಿದ್ದು ಈ ತನಕ 1591 ಬಿಡುಗಡೆಯಾದಂತಾಗಿದೆ. ಇಬ್ಬರು ಮೃತಪಟ್ಟಿದ್ದು, ಒಟ್ಟು 526 ಸಕ್ರೀಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಪ್ರತಿನಿತ್ಯ 50 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಅಲ್ಲದೆ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಸೋಂಕು ದೃಡಪಡುತ್ತಿದ್ದು ಜನತೆಯಲ್ಲಿ ಆತಂಕ ಮನೆಮಾಡಿದೆ. ಜಿಲ್ಲಾಡಳಿತ ಸೋಂಕು ತಡೆಗೆ ಸಕಲ ಕಮ ಜರಗಿಸುತ್ತಿದ್ದರೂ, ಸಾರ್ವಜನಿಕರು ಮಾತ್ರ ಸಾಮಾಜಿಕ ಅಂತರ, ಮಾಸ್ಕ ಧರಿಸದೆ ಗುಂಪು ಗುಂಪಾಗಿ ಸೇರುತ್ತಿರುವುದು ಕೊರೋನಾ ತಡೆಗೆ ಹಿನ್ನಡೆಯಾಗುತ್ತಿದೆ. ಅದಕ್ಕಾಗಿ ಜನರು ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!