ಯಾದಗಿರಿ : ಸೋಮವಾರದಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ 69ಪ್ರಕರಣಗಳು ದೃಢಪಟ್ಟಿದ್ದು, 3906 ಕ್ಕೆ ಏರಿಕೆಯಾಗಿದೆ. ಒಟ್ಟು ಈ ತನಕ ಜಿಲ್ಲೆಯಲ್ಲಿ 135 ಜನರು ಗುಣಮುಖರಾಗಿದ್ದು, ಒಟ್ಟು 2653 ಜನ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಬವಿಸಿಲ್ಲ. ಹೀಗಾಗಿ ಒಟ್ಟು 23 ಜನ ಮೃತಪಟ್ಟಿದ್ದಾರೆ. ಪ್ರಸಕ್ತ್ತ 1230 ಸಕ್ರೀಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರತಿನಿತ್ಯ ಸೋಂಕಿನಿAದ ಮೃತರಾಗುತ್ತಿರುವುದು ಜನತೆಯಲ್ಲಿ ಆತಂಕ ಹುಟ್ಟಿಸಿದೆ. ಪ್ರಸಕ್ತ ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗುತ್ತಿರುವುದು ಗ್ರಾಮೀಣ ಜನರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣ ಎನ್ನಬಹುದಾಗಿದೆ.