Thursday, August 11, 2022

Latest Posts

ಯಾದಗಿರಿ ಜಿಲ್ಲೆಯಲ್ಲಿ 91 ಮಂದಿಗೆ ಸೋಂಕು ದೃಢ, 31 ಜನರು ಗುಣಮುಖ

 ಯಾದಗಿರಿ : ರಾಜ್ಯ ಸರಕಾರ ಬಿಡುಗಡೆ ಮಾಡಿದ  ಆರೋಗ್ಯ ಬುಲೆಟ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ 91 ಪ್ರಕರಣಗಳು ದೃಢಪಟ್ಟಿದ್ದು, 3061ಕ್ಕೆ ಏರಿಕೆಯಾಗಿದೆ. ಒಟ್ಟು ಈ ತನಕ ಜಿಲ್ಲೆಯಲ್ಲಿ 31 ಜನರು ಗುಣಮುಖರಾಗಿದ್ದು, ಒಟ್ಟು 2119 ಜನ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಬ್ಬರು ಮೃತಪಟ್ಟಿದ್ದು ಒಟ್ಟು 17 ಜನ ಮೃತಪಟ್ಟಿದ್ದಾರೆ. ಪ್ರಸಕ್ತ್ತ 925 ಸಕ್ರೀಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರತಿನಿತ್ಯ ಸೋಂಕಿನಿಂದ ಮೃತರಾಗುತ್ತಿರುವುದು ಜನತೆಯಲ್ಲಿ ಆತಂಕ ಹುಟ್ಟಿಸಿದೆ. ಪ್ರಸಕ್ತ ಜಿಲ್ಲೆಯಲ್ಲಿ ಮಳೆ ಇಲ್ಲದಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗುತ್ತಿರುವುದು ಗ್ರಾಮೀಣ ಜನರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣ ಎನ್ನಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss