Wednesday, August 17, 2022

Latest Posts

ಯಾದಗಿರಿ | ಜಿಲ್ಲೆಯ 87 ಪಾಸಿಟಿವ್ ವ್ಯಕ್ತಿಗಳ ಆರೋಗ್ಯ ಸ್ಥಿರ, 2821 ವರದಿ ನೆಗೆಟಿವ್, 3373 ವರದಿ ಬಾಕಿ

ಯಾದಗಿರಿ: ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಶನಿವಾರ ದೃಢಪಟ್ಟ 72 ಪಾಸಿಟಿವ್ ಪ್ರಕರಣ ಸೇರಿದಂತೆ ಮೇ 23ರವರೆಗೆ ಒಟ್ಟು 87 ವರದಿ ಪಾಸಿಟಿವ್ ಮತ್ತು 2,821 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಶನಿವಾರ ಕಳುಹಿಸಲಾದ 718 ಹೊಸ ಮಾದರಿಗಳು ಸೇರಿದಂತೆ 3,373 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 87 ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿರುತ್ತದೆ. ಹೊಸ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್ನಲ್ಲಿ 26 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್ನಲ್ಲಿ 53 ಮತ್ತು ಏಕಲವ್ಯ ಕೊರೊನಾ ಕೇರ್ ಸೆಂಟರ್ನಲ್ಲಿ 53 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 174 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 954 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 3 ಕಂಟೇನ್ಮೆಂಟ್ ಝೋನ್ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!