Friday, July 1, 2022

Latest Posts

ಯಾದಗಿರಿ| ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶ: 2 ವಾರ ಮುಂದೂಡಿಕೆ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಸಕಾರಾತ್ಮಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಈಗಾಗಲೇ 15 ಕ್ಕಿಂತ ಹೆಚ್ಚು ನಿಯಂತ್ರಿತ ವಲಯಗಳ ಅಧಿಸೂಚನೆ ಹೊರಡಿಸಿರುವುದರಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ಎರಡು ವಾರಗಳವರೆಗೆ ಮುಂದೂಡಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದಿಂದ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕಾಗಿ ಜೂನ್ 8ರಿಂದ ಅನುಮತಿಸಲಾಗಿತ್ತು. ಆದರೆ, ಯಾದಗಿರಿ ಜಿಲ್ಲೆಯಲ್ಲಿ ಕೋವಿಡ್ ಸಕಾರಾತ್ಮಕ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ನೀಡಿರುವ ಸಲಹೆ ಮೇರೆಗೆ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು
ಎರಡು ವಾರಗಳವರೆಗೆ ಮುಂದೂಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss