Thursday, August 11, 2022

Latest Posts

ಯಾದಗಿರಿ: ವಿಶ್ವಕರ್ಮರವರ ಜಯಂತ್ಯೋತ್ಸವ ಸರಳ ಆಚರಣೆ

ಯಾದಗಿರಿ : ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶ್ವಕರ್ಮರವರ ಜಯಂತ್ಯೋತ್ಸವದ ನಿಮಿತ್ತ ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್. ಅವರು ವಿಶ್ವಕರ್ಮರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 17ರಂದು ಗುರುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅವರ ಜಯಂತ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಜಿಲ್ಲಾ ಉಸ್ತುವಾರಿ ಮಹೇಶ ವಿಶ್ವಕರ್ಮ ತಡಿಬಿಡಿ, ದೇವಿಂದ್ರಪ್ಪ ಎಲ್ ವಡಿಗೇರಾ, ವಿಶ್ವ ಕರ್ಮ ಅಭಿವೃದ್ಧಿ ನಿಗಮದ ನಾಮ ನಿರ್ದೇಶನ ಸದಸ್ಯರಾದ ಬಸವರಾಜ ವಿಶ್ವಕರ್ಮ ಹಾಗೂ ವಿಶ್ವಕರ್ಮ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷರಾದ ಶಿವಣ್ಣ ಊನೂರು ಅವರು ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ವಿ. ಗುರುಲಿಂಗಾಚಾರ್ ಅವರು ಬರೆದ ಶ್ರೀ ವಿಶ್ವಕರ್ಮ ಮಹಿಮೆ ಪುಸ್ತಕವನ್ನು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್. ಅವರು ಬಿಡುಗಡೆ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss