Saturday, August 13, 2022

Latest Posts

ಯಾದಗಿರಿ| ಶನಿವಾರ 10 ಜನ ಗುಣಮುಖ, 1899 ವರದಿ ಬಾಕಿ!

ಯಾದಗಿರಿ: ನೋವೆಲ್ ಕೊರೋನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಜೂನ್ 20ರವರೆಗೆ ಒಟ್ಟು 877 ವರದಿ ಪಾಸಿಟಿವ್ ಬಂದಿವೆ. ಶನಿವಾರ ಯಾವುದೇ ಪಾಸಿಟಿವ್ ವರದಿಯಾಗಿರುವುದಿಲ್ಲ. ಶನಿವಾರದ 357 ನೆಗೆಟಿವ್ ವರದಿ ಸೇರಿ ಈವರೆಗೆ 20,759 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 499 ಮಾದರಿಗಳು ಸೇರಿದಂತೆ 1899 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 877 ವ್ಯಕ್ತಿಗಳ ಪೈಕಿ ಶನಿವಾರ ಮತ್ತೆ 10 ಜನ ಗುಣಮುಖರಾಗಿದ್ದು, ಜೂನ್ 20ರವರೆಗೆ ಒಟ್ಟು 499 ಜನ ಗುಣಮುಖರಾಗಿರುತ್ತಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 377 ಪ್ರಕರಣಗಳು ಸಕ್ರಿಯವಾಗಿರುತ್ತವೆ. ಸೋಂಕಿತರೊAದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,377 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,779 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 71 ಕಂಟೇನ್‌ಮೆoಟ್ ಝೋನ್‌ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 173 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪೂರ ಕೊರೋನಾ ಕೇರ್ ಸೆಂಟರ್‌ನಲ್ಲಿ 55 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್‌ನಲ್ಲಿ 50 ಮತ್ತು ಬಂದಳ್ಳಿ ಏಕಲವ್ಯ ಕೊರೋನಾ ಕೇರ್ ಸೆಂಟರ್‌ನಲ್ಲಿ 68 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 21 ಇನ್‌ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಒಟ್ಟು 743 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss