Sunday, August 14, 2022

Latest Posts

ಯಾದಗಿರಿ| ಶಹಾಪೂರ ತಾಲ್ಲೂಕಿನ ಕ್ವಾರಂಟೈನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ

ಯಾದಗಿರಿ : ಹೊರ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಆಗಮಿಸುವ ವಲಸೆ ಕಾರ್ಮಿಕರನ್ನು ಕೋವಿಡ್-19 ಸಂಬಂಧ 14 ದಿನಗಳವರೆಗೆ ಕ್ವಾರಂಟೈನ್ ಮಾಡುವ ಸಲುವಾಗಿ ಶಹಾಪೂರ ತಾಲ್ಲೂಕಿನಲ್ಲಿ ಹೊಸದಾಗಿ ಗುರುತಿಸಲಾದ ಮತ್ತು ಈಗಾಗಲೇ ಕ್ವಾರಂಟೈನ್ ಮಾಡಲಾದ ವಿವಿಧ ವಸತಿನಿಲಯ, ಶಾಲೆ-ಕಾಲೇಜು ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ನಂತರ ವಿದ್ಯಾರ್ಥಿನಿಯರ ಹಾಸ್ಟೆಲ್ ಅನ್ನು ಪರಿಶೀಲಿಸಿದರು. ನಂತರ ಹೋತಪೇಟದ ಜವಾಹರ ನವೋದಯ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಬೇಕಾದ ಮೂಲ ಸೌಕರ್ಯಗಳಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ತದನಂತರ ಶಹಾಪುರ ಬಾಪುಗೌಡ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಮತ್ತು ಭೀಮರಾಯನಗುಡಿಯಲ್ಲಿರುವ ಕೆಬಿಜೆಎನ್ಎಲ್ ವಸತಿಕಟ್ಟಡಗಳಿಗೆ ಭೇಟಿ ನೀಡಿದರು.
ಕೊನೆಯಲ್ಲಿ ಕನ್ಯಾಕೋಳೂರು ರಸ್ತೆಯಲ್ಲಿರುವ ಬಿಸಿಎಂ ಹಾಸ್ಟೆಲ್ಗೆ ಭೇಟಿ ನೀಡಿ, ಸದರಿ ಕ್ವಾರಂಟೈನ್ ಕೇಂದ್ರದಲ್ಲಿ ಕಾರ್ಮಿಕರಿಗೆ ನೀಡುತ್ತಿರುವ ಆಹಾರ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಹಾಪುರ ತಹಶೀಲ್ದಾರ್ ಜಗನ್ನಾಥರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಗುತ್ತೇದಾರ, ನಗರಸಭೆ ಪೌರಾಯುಕ್ತರಾದ ಬಸವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss