spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾದಗಿರಿ| ಹತ್ತಿಕುಣಿ ಅಣೆಕಟ್ಟೆಯಿಂದ ಹಳ್ಳಕ್ಕೆ ನೀರು ಬಿಡುಗಡೆ: ನದಿ ತೀರದ ಜನರು ಮುಂಜಾಗ್ರತೆ ವಹಿಸಲು ಸೂಚನೆ

- Advertisement -Nitte

ಯಾದಗಿರಿ: ಹತ್ತಿಕುಣಿ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾನಯನಕ್ಕೆ ನಿರಂತರವಾಗಿ ಒಳಹರಿವು ಬರುತ್ತಿದೆ. ಈ ಜಲಾನಯನವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿ ಮುಖಾಂತರ ಹಳ್ಳಕ್ಕೆ ಹರಿಯಬಿಡಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಣ್ಣೆತೋರಾ ಯೋಜನೆ ವಿಭಾಗ ನಂ. 4 ಹೆಬ್ಬಾಳ, ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಹತ್ತಿಕುಣಿ ಹಳ್ಳದ ಸುತ್ತಮುತ್ತಲಿನ ಗ್ರಾಮಗಳ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ಹಳ್ಳದ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ
ನೀರು ಕುಡಿಸುವುದಾಗಲಿ ಹಾಗೂ ಇನ್ನಿತರೆ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ಹಳ್ಳದ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬoಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss