ಯಾದಗಿರಿ: ಬುಧವಾರದಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ ಆರೋಗ್ಯ ಬುಲೆಟ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ 114 ಪ್ರಕರಣಗಳು ದೃಢಪಟ್ಟಿದ್ದು, 2233 ಕ್ಕೆ ಏರಿಕೆಯಾಗಿದೆ. ಇಂದು 28 ಜನ ಬಿಡುಗಡೆಯಾಗಿದ್ದು ಈ ತನಕ 1619 ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ. ಇಬ್ಬರು ಮೃತಪಟ್ಟಿದ್ದು, ಒಟ್ಟು 612 ಸಕ್ರೀಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇಂದು 114 ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಅಲ್ಲದೆ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಸೋಂಕು ದೃಡಪಡುತ್ತಿದ್ದು ಜನತೆಯಲ್ಲಿ ಆತಂಕ ಮನೆಮಾಡಿದೆ. ಮುಂದಿನ ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗಲಿವೆ ಎಂಬುದು ತಿಳಿದು ಬಂದಿದೆ.