ಯಾದಗಿರಿ: ದೇಶದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿರುವುದರ ಮದ್ಯೆ ಕೊರೋನಾಸೊಂಕಿನಿoದ ಗುಣಮುಖರಾಗುತ್ತಿರುವವರ ಸಂಖ್ಯೆಯು ಹೆಚ್ಚುತ್ತಿರುವುದು ನೆಮ್ಮದಿಯ ಸಂಗತಿಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿನಿoದ ನಗರದ ನಿಷ್ಠಿ ಕೋವಿಡ್-19 ಆಸ್ಪತ್ರೆಗೆ ಸೇರಿದ್ದವರಲ್ಲಿ ಗುಣಮುಖರಾಗಿರುವ 32 ಜನರನ್ನು ಬಿಡುಗಡೆಗೊಳಿಸಲಾಯಿತು.ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ ಮಾಹಿತಿ ನೀಡಿ, ಇಲ್ಲಿಯವರೆಗೆ ನಮ್ಮಲ್ಲಿಯ ಕೋವಿಡ್-19 ಆಸ್ಪತ್ರೆಯಲ್ಲಿದ್ದ ಒಂದು ನೂರು ಜನ ಸೊಂಕಿತರಲ್ಲಿ ಈಗಾಗಲೆ ಗುಣಮುಖರಾದ 28 ಜನರನ್ನು ಬಿಡುಗಡೆಗೊಳಿಸಲಾಗಿತ್ತು, ಇಂದು 33 ಜನ ಗುಣಮುಖರಾದವರನ್ನು ಬಿಡುಗಡೆಗೊಳಿಸಲಾಗಿದೆ ಅಲ್ಲದೆ ಒಬ್ಬ ಗರ್ಭಿಣಿ ಮಹಿಳೆಯನ್ನು ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ನಿತ್ಯವು ಸೊಂಕಿತರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಏರುತ್ತಿರುವ ಸಂದರ್ಭದಲ್ಲಿ ಗುಣಮುಖರಾಗಿರುವ 61 ಜನರನ್ನು ಬಿಡುಗಡೆಗೊಳಿಸಲಾಗುತ್ತಿರುವುದು ಜಿಲ್ಲೆಯ ಜನರಲ್ಲಿ ನೆಮ್ಮದಿ ಮೂಡಿಸಿದೆ.