Friday, July 1, 2022

Latest Posts

ಯಾದಗಿರಿ| 5291 ವರದಿ ನೆಗೆಟಿವ್, 6367 ವರದಿ ಬಾಕಿ

ಯಾದಗಿರಿ : ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳ ಪೈಕಿ ಬುಧವಾರ ಪಾಸಿಟಿವ್ ಬಂದ 16 ಪ್ರಕರಣ ಸೇರಿದಂತೆ ಮೇ 27ರವರೆಗೆ ಒಟ್ಟು 156 ವರದಿ ಪಾಸಿಟಿವ್ ಮತ್ತು 5,291 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಬುಧವಾರ ಕಳುಹಿಸಲಾದ 1,862 ಹೊಸ ಮಾದರಿಗಳು ಸೇರಿದಂತೆ 6,367 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 156 ವ್ಯಕ್ತಿಗಳ ಪೈಕಿ 9 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 146 ಪ್ರಕರಣಗಳು ಸಕ್ರಿಯವಾಗಿವೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 347 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 1312 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 4 ಕಂಟೇನ್ಮೆಂಟ್ ಝೋನ್ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 77 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪೂರ ಕೊರೊನಾ ಕೇರ್ ಸೆಂಟರ್ನಲ್ಲಿ 59 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್ನಲ್ಲಿ 28 ಮತ್ತು ಏಕಲವ್ಯ ಕೊರೊನಾ ಕೇರ್ ಸೆಂಟರ್ನಲ್ಲಿ 59 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss