spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, January 27, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾರಾದರೂ ಬ್ಲಾಕ್ ಮೇಲ್ ಮಾಡುತ್ತಿದ್ದರೆ, ಅಂಥವರ ವಿರುದ್ಧ ಯಡಿಯೂರಪ್ಪ ಕ್ರಿಮಿನಲ್ ಕೇಸ್‌ ಹಾಕಲಿ: ಸಿದ್ದರಾಮಯ್ಯ

- Advertisement -Nitte

ಹೊಸ ದಿಗಂತ ವರದಿ ಮೈಸೂರು:

ಯಾರಾದರೂ ಬ್ಲಾಕ್ ಮೇಲ್ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್‌ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಕಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಗುರುವಾರ ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ತೋರಿಸಿ, ಕೆಲವರು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಈಗ ಕೆಲವು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ.

ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ. ಯಾರು ದುರ್ಬಲ ಮುಖ್ಯಮಂತ್ರಿಯಾಗಿರುತ್ತಾರೆ, ಅವರಿಗೆ ಮಾತ್ರ ಬ್ಲಾಕ್ ಮೇಲ್ ಮಾಡ್ತಾರೆ. ಹಾಗಾಗಿ ಯಾರಾದರೂ ಸಿಡಿ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಿ. ಸಿಡಿ ಬಗ್ಗೆ ಅವರ
ಅವರ ಪಕ್ಷದವರೆ ಆರೋಪ ಮಾಡುತ್ತಿದ್ದಾರೆ ಅಂದರೆ, ಅದರಲ್ಲಿ ಸತ್ಯ ಇದೆ ಅಲ್ವಾ? ನಾವು ಮಾಡಿದರೆ ವಿರೋಧ ಪಕ್ಷದವರು ಅಂತಾರೆ. ಸಿಎಂ ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ. ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ, ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳುತ್ತೇನೆ ಎಂದರು.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಹಿಂದೆಯೂ ನಾನು ಹೇಳಿದ್ದೆ. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ರೂ. ಯಡಿಯೂರಪ್ಪ ಅವರ ಕುಟುಂಬದವರ ಅಕೌಂಟ್ ಗೆ ಹೋಗಿತ್ತು. ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ, ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಜಾರಿಗೊಳಿಸಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾಯಕತ್ವ ಬದಲಾವಣೆಗೆ ಸಿದ್ದರಾಮಯ್ಯ ದಿನಾಂಕ ನಿಗದಿ ಮಾಡಲಿ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಷ್ಟು ದಿನಗಳ ಕಾಲ ಮಂತ್ರಿ ಮಂಡಲ ವಿಸ್ತರಣೆ ಯಾಕೇ ಮಾಡಿರಲಿಲ್ಲ. ಮಂತ್ರಿ ಮಂಡಲ ವಿಸ್ತರಣೆಗೆ ಯಾಕೇ ಲೇಟ್ ಆಯ್ತು. ಗೋಗರೆದು, ಕೈಕಾಲು ಕಟ್ಟಿ ಮಂತ್ರಿ ಮಂಡಲ ವಿಸ್ತರಣೆ ಮಾಡಿಸಿಕೊಂಡಿರೋದು ಎಂದು ಟೀಕಿಸಿದರು.
ಒಬ್ಬ ಸಚಿವನನ್ನು ಸಂಪುಟದಿಂದ ಬಿಟ್ಟಿದ್ದಾರೆ. ಯಾವ ಕಾರಣಕ್ಕೆ ಬಿಟ್ಟಿದ್ದಾರೆ ಎಂದು ಕಾರಣ ಕೊಟ್ಟಿಲ್ಲ. ಪಕ್ಷೇತರನಾಗಿ ಕಾಂಗ್ರೆಸ್ ಪಕ್ಷದ ಸಹಾಯದೊಂದಿಗೆ ಗೆದ್ದಿದ್ದ ಪಕ್ಷೇತರ ಶಾಸಕ ನಾಗೇಶ್ ರನ್ನ ಕೈಬಿಟ್ಟಿದ್ದಾರೆ. ಅವರನ್ನ ಯಾವ ಕಾರಣಕ್ಕೆ ಡ್ರಾಪ್ ಮಾಡಿದ್ದಾರೆ ಎಂದು ಹೇಳಿಲ್ಲ. ಅವರು ಕೂಡ ಆಪರೇಷನ್ ಕಮಲಕ್ಕೆ ಒಳಪಟ್ಟವರು ಎಂದರು.

ಈಗ ಶಾಸಕ ಮುನಿರತ್ನರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಾರೆ. ಕಾನೂನು ತೊಡಕಿದೆ ಎಂದು ಗೊತ್ತಿದ್ದರೂ ಯಾಕೆ ಕರೆದುಕೊಂಡರು. ಅವರನ್ನ ಮಿನಿಸ್ಟರ್ ಮಾಡಲು ಆಗಲಿಲ್ಲ ಎಂದಮೇಲೆ ಯಾಕೆ ತಗೆದುಕೊಂಡರು ಅವನನ್ನ? ವಿಶ್ವನಾಥ್ ಪಾಪ ಬಾಯಿ ಬಡ್ಕೊತ್ತಿದ್ದಾನೆ ಎಂದು ವ್ಯಂಗ್ಯವಾಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss