Thursday, July 7, 2022

Latest Posts

ಯುಕೆ ಹೈಬ್ರೀಡ್ ಕೊರೋನಾ: ದೇಶದಲ್ಲಿ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಯುಕೆ ಹೈಬ್ರೀಡ್ ಕೊರೋನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಇನ್ನು ಎಲ್ಲಾ ಸೋಂಕಿತರನ್ನು ಆಯಾ ರಾಜ್ಯಗಳ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಸಹ ಪ್ರಯಾಣಿಕರಲ್ಲಿ ಇರಬಹುದಾದ ಸೋಂಕು ಪೀಡಿತರನ್ನು ಗುರುತಿಸುವ ಕಾರ್ಯ ನಡೆದಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಹೈಬ್ರೀಡ್ ಕೊರೋನಾ ಭಾರತ ಮಾತ್ರವಲ್ಲದೆ ಡೆನ್ಮಾರ್ಕ್, ನೆದರ್ಲ್ಯಾಂಡ್ಸ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಸ್ವಿಟ್ಜರ್ಲೆಂಡ್, ಜರ್ಮನಿ, ಕೆನಡಾ, ಜಪಾನ್, ಲೆಬನಾನ್ ಮತ್ತು ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss