ಬೆಂಗಳೂರು: ಯುಪಿಯಲ್ಲಿನ ಘಟನೆ ಖಂಡಿಸಿ, ಅಹೋರಾತ್ರಿ ಧರಣಿ ನಿರತರಾಗಿದ್ದಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಯುಪಿಯಲ್ಲಿ ರಾಹುಲ್ ಗಾಂಧಿಯವರನ್ನು ನಡೆಸಿಕೊಂಡ ಪೊಲೀಸರ ನಡೆಯನ್ನು ಖಂಡಿಸಿ, ನಗರದಲ್ಲಿ ಕಾಂಗ್ರೆಸ್ ಮುಖಂಡರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಇಂತಹ ಪ್ರತಿಭಟನೆಯಲ್ಲಿ ನಿರತರಾಗಿದ್ದಂತ ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.