Monday, August 8, 2022

Latest Posts

ಯುವಕರನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲು ಹೊಸ ರೈತರಿಗೂ ಸಾಲ ಸೌಲಭ್ಯ: ಸಚಿವ ಸೋಮಶೇಖರ್

ಶಿವಮೊಗ್ಗ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಯುವಕರು ತಮ್ಮ ಗ್ರಾಮಗಳಿಗೆ ಹಿಂದಿರುಗಿದ್ದಾರೆ. ಯುವಕರನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲು ಅನುಕೂಲವಾಗುವಂತೆ ಹೊಸ ರೈತರಿಗೂ ಕೂಡ ಸಾಲ ಸೌಲಭ್ಯ ನೀಡಿ ಪ್ರೋತ್ಸಾಹಿಸಲು ಉದ್ದೇಶಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ಮಾಮ್ಕೋಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಪ್ರಿಲ್ 1ರಿಂದಲೇ ಅನ್ವಯವಾಗುವಂತೆ ಹೊಸ ಸಾಲಸೌಲಭ್ಯ ನೀಡುವ ಕಾರ್ಯ ಆರಂಭವಾಗಿದೆ. ಈ ಯೋಜನೆಯಡಿ ಹೊಸ ಅರ್ಹ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಮೂರು ಲಕ್ಷ ವರೆಗೆ, ಹಾಗೆಯೆ ಶೇಕಡಾ ಮೂರರ ಬಡ್ಡಿದರದಲ್ಲಿ 10 ಲಕ್ಷ ರೂಗಳ ವರೆಗೆ ಸಾಲ ಸೌಲಭ್ಯ ನೀಡಲಾಗುವುದು ಎಂದರು.
ರಾಜ್ಯದ ಹಲವು ಗ್ರಾಮೀಣ ವಿಎಸ್ ಎಸ್. ಎನ್ ಸಹಕಾರ ಸಂಘಗಳಲ್ಲಿ ಅನಾಮಧೇಯ ವ್ಯಕ್ತಿಗಳ ಹೆಸರಲ್ಲಿ ಸಾಲ ಸೌಲಭ್ಯ ನೀಡಿಕೆ, ಅಂತಹವರ ಹೆಸರಿನ ಸಾಲ ಮನ್ನಾ ಆಗಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದರು.
ಸಹಕಾರ ಇಲಾಖೆಯಲ್ಲಿನ ಅಧಿಕಾರಿ ನೌಕರರ ಸಿಬ್ಬಂದಿಗಳ ಕೊರತೆ ನೀಗಿಸಲು ಲೆಖ್ಖಪತ್ರ ಇಲಾಖೆಯನ್ನು ಸಹಕಾರ ಇಲಾಖೆಯೊಂದಿಗೆ ವಿಲೀನಗೊಳಿಸಿ, ನೌಕರರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಇಲಾಖೆಯ ಉಪನಿಬಂಧಕ ಎಸ್.ನಾಗೇಶ್ ಡೋಂಗ್ರೆ, ಲೆಕ್ಕ ಪರಿಶೋಧನ ಇಲಾಖೆಯ ಉಪನಿರ್ದೇಶಕ ಮಹೇಶ್ವರಪ್ಪ, ಜಿಲ್ಲೆಯ ಎಲ್ಲಾ ತಾಲೂಕುಗಳ ಎಪಿಎಂಸಿ ಕಾರ್ಯದರ್ಶಿಗಳು, ಸಹಕಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss