Wednesday, August 10, 2022

Latest Posts

ಯುವಕರು ಮೂರು ತಿಂಗಳಿಗೊಮ್ಮೆ ರಕ್ತ ನೀಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು: ಸಚಿವ ಶ್ರೀ ಕೆ. ಗೋಪಾಲಯ್ಯ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 67 ನಾಗಪುರದ ಶಾಸಕರ ಭವನದಲ್ಲಿ ಇಂದು ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಮಂಡಲ ಅಧ್ಯಕ್ಷ ರಾದ ರಾಘವೇಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು.

ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಶ್ರೀ ಕೆ. ಗೋಪಾಲಯ್ಯ ನವರೂ ಆಗಮಿಸಿ ದೀಪ ಹಚ್ಚುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಸಮಾಜದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸುವುದು ಪುಣ್ಯದ ಕೆಲಸ. ಯುವಕರು ಪ್ರತಿ ಮೂರೂ ತಿಂಗಳಿಗೊಮ್ಮೆ ರಕ್ತ ನಿಡುವದರಿಂದ ತಮ್ಮ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಇಂದು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ 7 ವಾರ್ಡ್ ಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಡೆಯುವ ಈ ರಕ್ತದಾನ ಶಿಬಿರದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಮುಂದೆ ಬಂದು ರಕ್ತದಾನ ಅಭಿಯಾನಕ್ಕೆ ಕೈಜೋಡಿಸಿ ಯಶಸ್ವಿ ಗೊಳಿಸಬೇಕು ಎಂದರು.

ಇದೇ ಸಮಯದಲ್ಲಿ ರಕ್ತ ದಾನ ಮಾಡಿದ ದಾನಿಗಳಿಗೆ ಕುಶಲೋಪರಿ ವಿಚಾರಿಸಿಕೊಂಡು ಪ್ರಮಾಣ ಪತ್ರ ವಿತರಿಸಿದರು. ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಮಂಡಲ ಅಧ್ಯಕ್ಷ ರಾದ ರಾಘವೇಂದ್ರ ಶೆಟ್ಟಿ ಮಾತನಾಡಿ ನಮ್ಮ ಕ್ಷೇತ್ರದ ಎಲ್ಲ ವಾರ್ಡ್ ಗಲ್ಲಿ ಕನಿಷ್ಠ 500 ಲೀಟರ್ ರಕ್ತವನ್ನು ಸಂಗ್ರಹಿಸಿ ಆರೋಗ್ಯ ಭಾರತಿ ರಾಷ್ಟ್ರೋತ್ಥಾನ ಕೇಂದ್ರಕ್ಕೆ ನೀಡಲಾಗುವುದು ಈ ಕರೋನ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಂಡು,ಮಾಸ್ಕ್ ಮತ್ತು ಇನ್ನಿತರ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ನಮ್ಮ ಪಕ್ಷದ ಆದೇಶದಂತೆ ಈ ಕಾರ್ಯ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಸ್ ಹರೀಶ್,ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ರಾದ ಎನ್ ಜಯರಾಮ್ ಕೆಬಿ ವೆಂಕಟೇಶಮೂರ್ತಿ ಗಂಗ ಹನುಮಯ್ಯ ನಿಸರ್ಗ ಜಗದೀಶ್ ಡಾ, ನಾಗೇಂದ್ರ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss