ಹೊಸ ದಿಗಂತ ವರದಿ, ಮಡಿಕೇರಿ:
ಭಾರತ ಸರ್ಕಾರ, ನೆಹರೂ ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ಸಂಸತ್ತು ಭಾಷಣ ಸ್ಪರ್ಧೆಯಲ್ಲಿ ಅಚಲ್ ಪಿ.ಮಯ್ಯ ಅವರು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿರುವ ಅಚಲ್ ಪಿ.ಮಯ್ಯ, ಜ.12ರಂದು ನವದೆಹಲಿಯ ಭಾರತದ ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಪ್ರಧಾನಮಂತ್ರಿ ಹಾಗೂ ಇತರ ಸಚಿವರ ಸಮ್ಮುಖದಲ್ಲಿ ನಡೆಯುವ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಕುಶಾಲನಗರದ ಜಿ.ಎಲ್.ನಾಗರಾಜ್ ಅವರ ಮೊಮ್ಮಗನಾಗಿರುವ ಅಚಲ್, ಎನ್.ಪ್ರದೀಪ್ ಹಾಗೂ ಪಿ.ರಜನಿ ದಂಪತಿಯ ಪುತ್ರ.