Sunday, August 14, 2022

Latest Posts

ಯೂರಿಯಾ ರಸಗೊಬ್ಬರವನ್ನು ಸಕಾಲಕ್ಕೆ ಸರಬರಾಜು ಮಾಡಲು ಸಕಲ ಸಿದ್ಧತೆ ನಡೆದಿದೆ: ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಮಳೆಗಾಲ ಪ್ರಾರಂಭವಾಗಿದೆ. ಕೃಷಿ ಚಟುವಟಿಕೆ ಪ್ರಾರಂಭವಾಗಿದೆ. ರೈತರಿಗೆ ಕೃಷಿಗೆ ತೊಂದರೆಯಾಗದಂತೆ ಸಕಾಲಕ್ಕೆ ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡಲು ಸಕಲ ಸಿದ್ಧತೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಜುಲೈನಲ್ಲಿ ರೈತರಿಗೆ ಯೂರಿಯಾ ಗೊಬ್ಬರವನ್ನು ಸರಿಯಾಗಿ ತಲುಪಿಸಲು ಸಾಧ್ಯವಾಗಿರಲಿಲ್ಲ. ಏಕೆಂದರೆ ಯೂರಿಯಾ ತುಂಬಿದ ಹಡಗು ಸಕಾಲಕ್ಕೆ ಬರಲಿಲ್ಲ. ಆದರೆ ಅಗಸ್ಟ್‌ನಲ್ಲಿ ಸರಿಯಾದ ಸಮಯಕ್ಕೆ ರೈತರಿಗೆ ಯೂರಿಯಾ ರಸಗೊಬ್ಬರ ತಲುಪಿಸುತ್ತೇವೆ ೧.೭೭ ಲಕ್ಷ ಟನ್ ಬೇಡಿಕೆಯಿದೆ. ಬೇಡಿಕೆಯನ್ನು ಪೂರೈಸಲು ಸಕಲ ಸಿದ್ಧತೆ ನಡೆದಿದೆ ಎಂದು ಹೇಳಿದರು.

ಯೂರಿಯಾ ರಸಗೊಬ್ಬರವನ್ನು ರೈತರಿಗೆ ತಲುವಿಸುವಲ್ಲಿ ಯಾವುದೇ ಅಕ್ರಮ ನಡೆದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss