ಹೊಸದಿಗಂತ ವರದಿ, ಧಾರವಾಡ
ಜಿಪಂ ಸದಸ್ಯ ಯೋಗೇಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನ.19ಕ್ಕೆ ಮುಂದೂಡಿದೆ.
ಬುಧವಾರ ಜಾಮೀನು ಅರ್ಜಿ ವಿಚಾರಣೆ ಕೈಗತ್ತಿಕೊಂಡ ಸಿಬಿಐ ವಿಶೇಷ ನ್ಯಾಯಾಲಯವು, ಸಿಬಿಐ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸದ ಹಿನ್ನಲೆ ವಿಚಾರಣೆ ನ.19ಕ್ಕೆ ಮುಂದೂಡಿತು. ನ್ಯಾಯಾಲಯ ಜಾಮೀನು ಅರ್ಜಿಗೆ ತಕರಾರು ಸಲ್ಲಿಕೆಗೆ ಸಿಬಿಐಗೆ ನ.18ರವರೆಗೆ ಕಾಲಾವಕಾಶ ನೀಡಿತ್ತು. ಆದರೆ, ನಾಳೆಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರಿಂದ ವಿಚಾರಣೆ ಮುಂದೂಡಿತು.
ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲ ಭರತಕುಮಾರ ಅವರು ಜಾಮೀನು ಕೋರಿ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿಂದೆ ನ.12ರಂದು ನಡೆದ ವಿಚಾರಣೆ ನಡೆಸಿದ ನಿಯೋಜಿತ ನ್ಯಾಯಾಧೀಶ ಪಂಚಾಕ್ಷರಿ ಎಂ ಅವರು, ನ.18ಕ್ಕೆ ಮುಂದೂಡಿದ್ದರು. ಈಗ ಗುರುವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.