Wednesday, August 17, 2022

Latest Posts

ಯೋಗೇಶಗೌಡ ಗೌಡರ ಕೊಲೆ ಪ್ರಕರಣ: ಜಿಪಂ ಉಪಾಧ್ಯಕ್ಷರ ವಿಚಾರಣೆ

ಧಾರವಾಡ: ಜಿಲ್ಲಾ ಪಂಚಾಯತಿ ಹುಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೀಗೇಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರವೂ ಹಲವರನ್ನು ವಿಚಾರಣೆಗೆ ಒಳಪಡಿಸಿದೆ.

ಪ್ರಕರಣ ಕುರಿತು ಬುಧವಾರ ಸಿಬಿಐ ಅಧಿಕಾರಿಗಳ ತಂಡ ಹಲವರ ವಿಚಾರಣೆ ನಡೆಸಿದ್ದು, ಗುರುವಾರ ಯೋಗೇಶಗೌಡರ ಪತ್ನಿ ಮಲ್ಲಮ್ಮ ಗೌಡರ, ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ ವಿಚಾರಣೆಗೆ ಒಳಪಡಿಸಿದೆ.

ಯೋಗೇಶಗೌಡರ ಪತ್ನಿಯಾದ ಮಲ್ಲಮ್ಮ ಅವರನ್ನು ಕಾಂಗ್ರೆಸ್ ಗೆ ಸೇರ್ಪಡಿಸುವಲ್ಲಿ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಮುಖ್ಯ ಪಾತ್ರ ವಹಿಸಿದ ಹಿನ್ನಲೆ ಇಲ್ಲಿನ ಉಪನಗರ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸುವ ಜತೆಗೆ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ಬುಧವಾರ ಕೊಲೆ ಪ್ರಕರಣದ ಸಾಕ್ಷ್ಯ ನಾಶದ ಬಗ್ಗೆ ಪ್ರತ್ಯೇಕ ಎಫ್.ಐ.ಆರ್ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಿದ ಸಿಬಿಐ ಅಧಿಕಾರಿಗಳ ತಂಡು ಗುರುವಾರ ಪ್ರಕರಣದ  ತನಿಖೆ ಕೈಗೊಂಡು ಕೆಲವರನ್ನು ವಿಚಾರಣೆಗೆ ಒಳಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!