ಹೊಸ ದಿಗಂತ ವರದಿ, ಶಿವಮೊಗ್ಗ:
ಯೋಗ ಇರುವವರು ಸದ್ಯ ಮಂತ್ರಿಗಳಾಗಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಎಲ್ಲರೂ ಸಂದರ್ಭವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಮಂತ್ರಿಗಳಾಗಲು ಪಕ್ಷದಲ್ಲಿ ಯೋಗ್ಯತೆ ಇರುವವರು, ಅನುಭವಿಗಳು ಸಾಕಷ್ಟು ಜನರು ಇದ್ದಾರೆ. ಆದರೆ ಅಷ್ಟೊಂದು ಅವಕಾಶ ಇಲ್ಲ ಎಂದರು.
ಎಲ್ಲಾ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸಿ ಕಾರ್ಯಕರ್ತರು ತಲೆ ಎತ್ತಿ ಓಡಾಡುವ ವಾತಾವರಣ ನಿರ್ಮಾಣ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.