ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮಮಂದಿರ ಲೋಕಾರ್ಪಣೆಯಾಗಿರುವುದು ಇಡೀ ನಾಡಿಗೆ ಸಂತಸದ ವಿಷಯ. ಅಯೋಧ್ಯೆಯಲ್ಲಿ ರಾಮಲಲಾ ಮೂರ್ತಿ ಪ್ರತಿಷ್ಠಾಪನೆ ಆದರೆ ಕರ್ನಾಟಕದಲ್ಲಿ ಯಾಕೆ ರಜೆ ಕೊಡಬೇಕು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಹೋಬಳಿಯ ಹಿರಂಡಳ್ಳಿಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ.
ಕೇರಳ, ದೆಹಲಿ, ಪಶ್ಚಿಮ ಬಂಗಾಳದಲ್ಲಿ ರಜೆ ಇದ್ಯಾ? ಎಲ್ಲ ರಾಜ್ಯಗಳಿಗೂ ಕೇಂದ್ರ ರಜೆ ನೀಡಿದೆಯಾ? ಎಂದು ಸಿಎಂ ಪ್ರಶ್ನಿಸಿದ್ದಾರೆ.