Sunday, August 14, 2022

Latest Posts

ರಣಹದ್ದುಗಳ ಸಂರಕ್ಷಣೆಗೆ ರಾಮನಗರದಲ್ಲಿ ಫೀಡಿಂಗ್ ಕ್ಯಾಂಪ್ ನಿರ್ಮಾಣ: ಅರಣ್ಯ ಸಚಿವ ಆನಂದ್ ಸಿಂಗ್

ಬಳ್ಳಾರಿ: ಪ್ರಸ್ತುತ ರಣಹದ್ದುಗಳ ಸಂತತಿ ಕ್ರಮೇಣ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ರಣಹದ್ದುಗಳ ಸಂತತಿ ರಕ್ಷಣೆ ಸಲುವಾಗಿ ರಾಮನಗರದಲ್ಲಿ ರೂ.2 ಕೋಟಿ ವೆಚ್ಚದಲ್ಲಿ ರಣಹದ್ದು ಫೀಡಿಂಗ್ ಕ್ಯಾಂಪ್ ನಿರ್ಮಿಸಲಾಗುತ್ತ್ತಿದೆ ಎಂದು ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದ್‍ಸಿಂಗ್ ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಕಮಲಾಪುರ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಆವರಣದಲ್ಲಿ ವಲಯ ಅರಣ್ಯ ಇಲಾಖೆ ಬಳ್ಳಾರಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ 66ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅರಣ್ಯ ರಕ್ಷಣೆಯು ಸಾರ್ವಜನಿಕರಲ್ಲಿ ಸ್ವಯಂಕೃತವಾಗಿ ಮೂಡಬೇಕು, ಪ್ರಸ್ತುತ ದಿನಗಳಲ್ಲಿ ಪ್ರಕೃತಿಯನ್ನು ಕಾಣುವ ಹಾಗೂ ಬೆಳೆಸುವ ಮನಸ್ಥಿತಿ ಬದಲಾಗಬೇಕಿದೆ. ಇಲಾಖೆಯಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೆಚ್ಚು, ಇದನ್ನು ಸವಾಲಾಗಿ ಸ್ವೀಕರಿಸಿ ಇಲಾಖೆಯ  ಅಧಿಕಾರಿಗಳು ಅರಣ್ಯ ರಕ್ಷಣೆ ಜೊತೆ ಸಾರ್ವಜನಿಕರ ಜೊತೆ ಸ್ನೇಹ ಸಂಬಂಧ ಕೂಡ ಬೆಳೆಸಿಕೊಳ್ಳಬೇಕು. ಬಂಡೀಪುರ ಅರಣ್ಯ ಪ್ರದೇಶದ ಹಾಡಿಗಳಲ್ಲಿರುವ ಗುಂಪುಗಳೇ ಇಂದಿಗೂ ಅರಣ್ಯ ರಕ್ಷಣೆಯನ್ನು ಮಾಡುತ್ತಿವೆ. ಅವರ ಜೊತೆ ಎಲ್ಲರಿಗೂ ಅರಣ್ಯ ರಕ್ಷಣೆಯ ಕಲ್ಪನೆ ಹಾಗೂ ಕರ್ತವ್ಯ ಮೂಡಬೇಕು ಎಂದರು.
ಅರಣ್ಯ ಸಚಿವನಾಗಿ ಸರಂಕ್ಷಣಾ ಸಪ್ತಾಹ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನೆರವೇರಿಸಬೇಕಿತ್ತು. ಅರಣ್ಯ ಸಚಿವನಾಗಿ ಮೊದಲ ಕಾರ್ಯಕ್ರಮವಾದ್ದರಿಂದ ಸ್ವಕ್ಷೇತ್ರದಲ್ಲೇ ನೆರವೇರಿಸುವ ಇಚ್ಚೆಯಿಂದ ತಾಲೂಕಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss