Monday, August 8, 2022

Latest Posts

ರಬ್ಬರ್ ಮ್ಯಾಟ್ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ. ನಷ್ಟ

ಶ್ರೀರಂಗಪಟ್ಟಣ: ರಬ್ಬರ್ ಮ್ಯಾಟ್ ತಯಾರಿಕಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ತ್ಯಾಜ್ಯ ಸುಟ್ಟು ಹೋಗಿದೆ.
ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಬಳಿಯ ಪ್ಲಾಸ್ಟಿಕ್ ತ್ಯಾಜ್ಯದ ಗೋದಾಮಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಬೆಂಕಿ ನಂದಿಸುವ ಯತ್ನ ನಡೆಸಿದರಾದರೂ ಸಾಧ್ಯವಾಗಿಲ್ಲ, ಬೆಂಕಿಯ ಕೆನ್ನಾಗಿಗೆ ಸಿಬ್ಬ ಪ್ಲಾಸ್ಟಿಕ್ ತ್ಯಾಜ್ಯದ ದಟ್ಟವಾದ ಹೊಗೆ ಸುತ್ತಮುತ್ತನ ಪರಿಸರಕ್ಕೆ ಹರಡಿ ಅಕ್ಕ-ಪಕ್ಕದ ಜನರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss