ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಸ್ತೆಗೆ ಅಡ್ಡ ಬಂದ ದನವನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿಯಾಗಿ ಎರಡು ದನ ಸಾವನಪ್ಪಿರುವ ಘಟನೆ ಭಾನುವಾರ ತಡರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಮುಳ್ಳಿಕಟ್ಟೆಯಲ್ಲಿ ನಡೆದಿದೆ.
ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಗೆ ಅಡ್ಡ ಬಂದ ಐದು ದನವನ್ನು ತಪ್ಪಿಸಲು ಹೋಗಿ ಹೆದ್ದಾರಿ
ಮದ್ಯದ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ಎರಡು ದನ ಸಾವನಪ್ಪಿ, ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕ ಮತ್ತು ನಿರ್ವಾಹಕ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಗಂಗೊಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.