spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಸ್ತೆ ಅಪಘಾತ ತಡೆಯಲು ಸಾರ್ವಜನಿಕರಿಗೆ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡಿಸಿ ವಿ.ವಿ.ಜೋತ್ಸ್ನಾ ಸೂಚನೆ

- Advertisement -Nitte

ಹೊಸ ದಿಗಂತ ವರದಿ, ಕಲಬುರಗಿ‌:

ಅಪಘಾತ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕರೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಲಾಕ್‍ಡೌನ್ ಸಂದರ್ಭದಲ್ಲಿ ಅಪಘಾತ ಸಂಖ್ಯಾ ಪ್ರಕರಣಗಳು ಇಳಿಮುಖವಾಗಬೇಕಿತ್ತು, ಆದರೆ ಅಪಘಾತ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು.
ರಸ್ತೆ ಸುರಕ್ಷತೆ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚು ಅರಿವು ಮೂಡಿಸಬೇಕು. ಆಯಾ ಇಲಾಖೆಯವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟ್ವಿಟರ್, ವಾಟ್ಸಾಪ್ ಮುಂತಾದವುಗಳಲ್ಲಿ ಈ ಬಗ್ಗೆ ಜಾಗೃತಿ ಸಂದೇಶಗಳನ್ನು ನೀಡಬೇಕು. ಪೋಸ್ಟರ್, ಡಿಜಿಟಲ್ ಮುಂತಾದ ಮಾಹಿತಿಯನ್ನು ಕಾಲೇಜು ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‍ಗಳಿಗೆ ತಲುಪುವಂತಾಗoಬೇಕು. ಈ ಮೂಲಕ ಯುವಕರಲ್ಲಿ ಹೆಚ್ಚು ಅರಿವು ಮೂಡಿಸಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈಗಾಗಲೇ 120 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಆದರೆ, ಇವುಗಳಲ್ಲಿ ಕಪ್ಪು ಸ್ಥಳ (ಬ್ಲಾಕ್‍ಸ್ಪಾಟ್) ಕುರಿತು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸೇರಿ ಜಂಟಿಸಮೀಕ್ಷೆ ಮಾಡಿ ಗುರುತಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಂಬಂಧಪಟ್ಟ ಇಲಾಖೆಗಳಾದ ಲೋಕೋಪಯೋಗಿ, ಪ್ರಾದೇಶಿಕ ಸಾರಿಗೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ಮುಂತಾದ ಇಲಾಖೆಗಳು ಒಂದುವಾರದಲ್ಲಿ ಚರ್ಚಿಸಿ ಬ್ಲಾಕ್‍ಸ್ಪಾಟ್ ಗುರುತಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಂ ಜಾರ್ಜ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಇರುವ ಆಂಬ್ಯುಲೆನ್ಸ್ ಹಾಗೂ ಅಪಘಾತಕ್ಕೀಡಾದ ವಾಹನಗಳನ್ನು ಸಾಗಿಸುವ ವಾಹನಗಳ ವಿವರಗಳನ್ನು ಮುಂದಿನ ಸಭೆಯಲ್ಲಿ ನೀಡುವಂತೆ ಸೂಚಿಸಿದರು.
ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಡಿ. ನೂರ ಮಹಮ್ಮದ್ ಪಾಷಾ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss