ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೊಮ್ಮನಹಳ್ಳಿ ವಲಯದ ಅಪೂರ್ಣ ಕಾಮಗಾರಿಗಳ ಕುರಿತು ವರದಿ ಸಿದ್ಧಪಡಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೊಮ್ಮನಹಳ್ಳಿ ಸೇರಿದಂತೆ ಐಟಿ ಕಾರಿಡಾರ್‌ನ ರಸ್ತೆಗಳ ದಯನೀಯ ಸ್ಥಿತಿ ಮತ್ತು ಜಲಾವೃತ ಸ್ಥಿತಿಗತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಯೋಕಾನ್ ಸಂಸ್ಥಾಪಕ-ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಮಂಗಳವಾರ ನಡೆದ ‘ವಲಯದತ್ತ ಆಯುಕ್ತರ ನಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಎಲ್ಲ ಅಪೂರ್ಣ ಕಾಮಗಾರಿಗಳನ್ನು ಪಟ್ಟಿ ಮಾಡಿ ವರದಿ ತಯಾರಿಸಿ ಎಂದು ಆಯುಕ್ತರು ಅಧಿಕಾರಿಗಳಿಗೆ ತಿಳಿಸಿದರು.

ವಲಯದ ಎಲ್ಲ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಹಾನಿಗೊಳಗಾದ ರಸ್ತೆಗಳಿಗೆ ಡಾಂಬರೀಕರಣ, ಗುಂಡಿಗಳನ್ನು ತಕ್ಷಣವೇ ಮುಚ್ಚುವಂತೆ ಹೇಳಿದರು.

ನಗರದ ಸುತ್ತಮುತ್ತ ಇರುವ ಕೆರೆಗಳಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಕಸ ವಿಲೇವಾರಿ ಬಗ್ಗೆ ನಿಗಾ ವಹಿಸಲು ಮಾರ್ಷಲ್‌ಗಳನ್ನು ನಿಯೋಜಿಸುವಂತೆ ವಲಯ ಅಧಿಕಾರಿಗಳಿಗೆ ಸೂಚಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!