ಹೊಸದಿಗಂತ ಆನ್ಲೈನ್ ಡೆಸ್ಕ್:
ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದ್ದು, ವೈದ್ಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ತಶ್ವಿಕ್ ಬುಷ್ರಾ ಮೃತ ವಿದ್ಯಾರ್ಥಿನಿ.ಬೆಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯಾದ ತಶ್ವಿಕ್ ಲಿಂಗರಾಜಪುರಂನಲ್ಲಿ ವಾಸವಿದ್ದರು.
ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುವ ವೇಳೆ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಪಕ್ಕಕ್ಕೆ ಹೋಗಿದ್ದಾರೆ. ಹಿಂದಿಂದ ಬಂದ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಅಪಘಾತ ಸಂಭವಿಸಿದೆ.
ಡಿಕ್ಕಿ ಹೊಡೆದ ವಾಹನ ಸವಾರ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ.