spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಕಿಂಗ್ ಸ್ಟಾರ್ ಯಶ್’ಗೆ ನೋಟಿಸ್ ನೀಡಿಲ್ಲ, ಮನವಿ ಮಾಡಿದ್ದೇವೆ: ಸಚಿವ ಕೆ. ಸುಧಾಕರ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೆಜಿಎಫ್-2 ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಮನವಿ ಮಾಡಲಾಗಿದೆ. ಆದರೆ ಇದು ನೋಟಿಸ್ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಶ್ ಮೇಲೆ ನನಗೂ ಬಹಳ ಅಭಿಮಾನವಿದೆ. ಅವರು ತುಂಬಾ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ. ಯಶ್ ಅವರ ಕೆಜಿಎಫ್ ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ  ಅವರಿಗೆ ಮನವಿ ಮಾಡಲಾಗಿದೆ. ಆದರೆ ಇದು ನೋಟಿಸ್ ಅಲ್ಲ ಎಂದರು.

ಕೆಜಿಎಫ್ ಚಿತ್ರದಲ್ಲಿ ಸಿಗರೇಟು ಸೇದುವ ದೃಶ್ಯ ಇದೆ ಎಂದು ಕೇಳಿದ್ದೇನೆ. ಈ ದೃಶ್ಯವನ್ನು ತೆಗೆದುಹಾಕಿದರೆ ಸಮಾಜಕ್ಕೆ ಅನುಕೂಲ ಎಂದು ಮನವಿ ಮಾಡಲಾಗಿದೆ. ಏಕೆಂದರೆ ಯಶ್ ಅವರ ಅಭಿಮಾನಿಗಳಲ್ಲಿ ಅನೇಕ ಯುವಜನರು ಇದ್ದಾರೆ ಎಂದು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss