ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸ್ಯಾಂಡಲ್ ವುಡ್ ನಟ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಬೆಂಗಳೂರು ಕೊಲಂಬಿಯಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ರಾಘವೇಂದ್ರ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ವೈದ್ಯರು ಎಲ್ಲಾ ರೀತಿಯಲ್ಲಿ ಆರೋಗ್ಯ ಸಂಬಂಧಿ ಪರೀಕ್ಷೆ ಮಾಡಿದ್ದಾರೆ. ಇಂದು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾರೆ.
ರಾಘವೇಂದ್ರ ರಾಜ್ ಕುಮಾರ್ ಕುಟುಂಬ ವರ್ಗದವರು ಆಸ್ಪತ್ರೆಗೆ ಆಗಮಿಸಿದ್ದು, ವೈದ್ಯರ ಬಳಿ ಎಲ್ಲಾ ಚರ್ಚೆ ನಡೆಸಿದ್ದಾರೆ.