Wednesday, November 25, 2020

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ದಂಡಾಧಿಕಾರಿ ನಾಗೇಶ್

ರಾಮನಗರ: ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಮನೆ ಹಾಗೂ ಇತರೆ ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದ ಹಲವಾರು ವರ್ಷದ ಸಮಸ್ಯೆಗೆ ತಾಲ್ಲೂಕು ದಂಡಾಧಿಕಾರಿ ನಾಗೇಶ್ ಮುಕ್ತಿ ನೀಡಿದ ಘಟನೆ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಡಿ.ಕೆ.ಕಾಲೋನಿಯಲ್ಲಿ ಸುಮಾರು ೫೦ ಅಡಿ ಅಗಲದ ರಾಜಕಾಲುವೆ ಹಾದು ಹೋಗಿದೆ. ಕಾಲೋನಿಯಲ್ಲಿ ನಿರ್ಮಾಣವಾಗಿರುವ ಮನೆಗಳ ಮಾಲೀಕರು ರಾಜಕಾಲುವೆಯನ್ನು ಸ್ವಲ್ಪಸ್ವಲವೇ ಒತ್ತುವರಿ ಮಾಡಿಕೊಂಡು ೫೦ ಅಡಿ ಅಗಲದ ರಾಜಕಾಲುವೆಯನ್ನು ೧೦ ಅಡಿ ಅಗಲದ ರಾಜಕಾಲುವೆಯನ್ನಾಗಿ ನಿರ್ಮಾಣ ಮಾಡಿದ್ದರು. ಮಳೆಗಾಲದ ಸಂದರ್ಭದಲ್ಲಿ ಮಳೆ ನೀರು ಕಿರಿದಾದ ರಾಜಕಾಲುವೆಯಲ್ಲಿ ತೆರಳದೆ ಬೀದಿಗಳು ಹಾಗೂ ಮನೆಗಳಿಗೆ ನೀರು ಹರಿದು ಹೋಗಿ ಸಾರ್ವಜನಿಕರಿಗೆ ಭಾರಿ ಸಮಸ್ಯೆಯನ್ನು ಸೃಷ್ಠಿ ಮಾಡಿತು. ಹಲವಾರು ವರ್ಷಗಳಿಂದ ಮಳೆಗಾಲದಲ್ಲಿ ಡಿ.ಕೆ. ಕಾಲೋನಿಯಲ್ಲಿ ಈ ಒಂದು ಸಮಸ್ಯೆ ದೊಡ್ಡ ಸಮಸ್ಯೆಯಾಗಿ ನಿರ್ಮಾಣವಾಗಿತ್ತು. ಕೆಲ ವರ್ಷಗಳಿಂದಲೂ ತಾಲ್ಲೂಕು ದಂಡಾಧಿಕಾರಿಗಳಿಗೆ ಹಲವಾರು ಬಾರಿ ರಾಜಕಾಲುವೆ ಒತ್ತುವರಿ ಸಮಸ್ಯೆಯ ಬಗ್ಗೆ ಹಲವಾರು ಭಾರಿ ಮನವಿ ಅರ್ಪಿಸಿದರೂ ಪ್ರಯೋಜನವಾಗಿರಲಿಲ್ಲ. ಈ ಸಮಸ್ಯೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ತಾಲ್ಲೂಕು ದಂಡಾಧಿಕಾರಿ ನಾಗೇಶ್ ತಾಲ್ಲೂಕು ಪಂಚಾಯ್ತಿ ಅಧಿಕಾರಿ ವರ್ಗ, ಸರ್ವೆ ಅಧಿಕಾರಿಗಳು, ತಾಲ್ಲೂಕು ಆಡಳಿತ ಹಾಗೂ ಅಕ್ಕೂರು ಪೊಲೀಸರ ಸಹಕಾರದಲ್ಲಿ ರಾಜಕಾಲುವೆ ತೆರವು ಕಾರ್ಯಚರಣೆ ನಡೆಸಿದರು. ಸರ್ಕಾರಿ ರಾಜ ಕಾಲುವೆಗೆ ನೀರು ಕುಡಿದಷ್ಟೆ ಸುಲಭವಾಗಿ ಕಾಂಪೌಂಡ್ , ಪಡಸಾಲೆ, ಕಟ್ಟಡಗಳನ್ನು ನಿರ್ಮಾಣ ಮಾಡಿಕೊಂಡಿವವರು ಎಷ್ಟೆ ವಿರೋಧ ಹಾಗೂ ಮನವಿ ಮಾಡಿದರು. ಮುಲಾಜಿಲ್ಲದೆ ಜೆಸಿಬಿ ಮುಖಾಂತರ ತೆರವು ಕಾರ್ಯ ಮಾಡಿ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾದರು. ೫೦೦ ಮಿಟರ್ ಉದ್ದದ ರಾಜಕಾಲುವೆಯ ಒತ್ತುವರಿಯನ್ನು ತೆರವು ಕಾರ್ಯ ಕೈಗೊಂಡಿದ್ದರಿಂದ ಇಷ್ಟ ಬಂದ ರೀತಿಯಲ್ಲಿ ರಾಜಕಾಲುವೆಗೆ ಸ್ಲಾö್ಯಬ್‌ಗಳನ್ನು ನಿರ್ಮಾಣ ಮಾಡಿ ಅದರ ಮೇಲೆ ವಿವಿಧ ರೀತಿಯ ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದ ಮನೆಯ ಮಾಲೀಕರಿಗೆ ಮುಂಜಾನೆಯ ಬಿಗ್ ಶಾಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಕ್ಕೂರು ಪೊಲೀಸ್ ಠಾಣೆಯ ಪಿಎಸ್‌ಐ ಪಿಎಸ್‌ಐ, ಸರಸ್ವತಿ ಹಾಗೂ ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು. ವಿರುಪಾಕ್ಷಿಪುರ ಹೋಬಳಿಯ ಕಂದಾಯ ನಿರೀಕ್ಷಕ ರಜತ್ ಹಾಗೂ ಹಲವಾರು ಮಂದಿ ಹಾಜರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ನ. 26ರಂದು ಬಿಡುಗಡೆಯಾಗಲಿದೆ ‘ಸೂಪರ್ ಅಗೋಳಿ ಮಂಜಣ್ಣ’ ಚಿತ್ರದ ಟೀಸರ್

ಹೊಸ ದಿಗಂತ ವರದಿ, ಉಡುಪಿ: ತುಳುನಾಡಿನ ವೀರ ಪುರುಷ ಅಗೋಳಿ ಮಂಜಣ್ಣನ ಕುರಿತ ತುಳು, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಸೂಪರ್ ಅಗೋಳಿ ಮಂಜಣ್ಣ’ ತುಳು ಮ್ಯಾನ್ ಆ್ ತುಳುನಾಡ್ ಎಂಬ ಟ್ಯಾಗ್‌ಲೈನ್ ಹೊಂದಿರುವ...

Don't Miss

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...
error: Content is protected !!